ADVERTISEMENT

ಬಿದರಿ ದತ್ತಿ ಪ್ರಶಸ್ತಿಗೆ ಗಾಯಕಿ ಜಾನಕಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 5:27 IST
Last Updated 5 ಜನವರಿ 2026, 5:27 IST
<div class="paragraphs"><p>ಎಸ್‌. ಜಾನಕಿ</p></div>

ಎಸ್‌. ಜಾನಕಿ

   

ಬೀದರ್: ಜ. 9 ರಿಂದ 11ರ ವರೆಗೆ ನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಿದರಿ ಉತ್ಸವದಲ್ಲಿ ನೀಡಲಾಗುವ ಬಿದರಿ ದತ್ತಿ ಪ್ರಶಸ್ತಿಗೆ ಹಿನ್ನೆಲೆ ಗಾಯಕಿ ಎಸ್‌. ಜಾನಕಿ ಅಮ್ಮಾ ಅವರನ್ನು ಆಯ್ಕೆ ಮಾಡಲಾಗಿದೆ ಬೀದರ್ ಜಿಲ್ಲಾ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆ ರೇಖಾ ಅಪ್ಪಾರಾವ್ ಸೌದಿ ತಿಳಿಸಿದ್ದಾರೆ.

ಜಾನಕಿ ಅವರುಕನ್ನಡ, ತೆಲುಗು, ತಮಿಳು ಸೇರಿದಂತೆ ಸುಮಾರು 17ಕ್ಕೂ ಹೆಚ್ಚು ಭಾಷೆಗಳಲ್ಲಿ 50,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದು ಕನ್ನಡ ಚಿತ್ರರಂಗದಲ್ಲಿ ಅವರು ‘ಗಾನಕೋಗಿಲೆ’ ಎಂಬ ಬಿರುದು ಪಡೆದಿದ್ದಾರೆ.

ADVERTISEMENT

ಸಂಗೀತ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆಯನ್ನು ಗಮನಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.