ಔರಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ನಾಗೂರ (ಎಂ) ಗ್ರಾಮದಲ್ಲಿ ವಾಂತಿಭೇದಿಗೆ ನಾಲ್ವರು ಮಕ್ಕಳು ಸೇರಿದಂತೆ ಆರು ಜನ ಬುಧವಾರ ಅಸ್ವಸ್ಥಗೊಂಡಿದ್ದಾರೆ.
ತೀವ್ರ ಅಸ್ವಸ್ಥಗೊಂಡ ಮಾದಪ್ಪ ಹುಲಗೊಂಡ (65) ಅವರನ್ನು ಬುಧವಾರ ಸಂಜೆ ಬೀದರ್‌ನ ಬ್ರಿಮ್ಸ್‌ಗೆ ದಾಖಲಿಸಲಾಗಿದೆ. ಅಂಕಿತಾ ವೆಂಕಟ (14), ಸಹೋದರಿ ಅಕ್ಷತಾ ವೆಂಕಟ (9), ದಿವ್ಯಾ ಸಂತೋಷ (11), ಅಂಬಿಕಾ ವಿಜಯಕುಮಾರ (15) ಹಾಗೂ ಪ್ರಶಾಂತ ಮಡಿವಾಳ (30) ಅವರಿಗೆ ವಡಗಾಂವ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
‘ವಿಷಯ ತಿಳಿದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಮೂಲ ಪರಿಶೀಲಿಸಿದ್ದೇವೆ. ಒಟ್ಟು ಮೂರು ಮನೆಯ ಆರು ಜನರಲ್ಲಿ ಮಾತ್ರ ವಾಂತಿಭೇದಿ ಕಾಣಿಸಿಕೊಂಡಿದೆ. ಉಳಿದ ಜನರಿಗೆ ಅಂತಹ ಯಾವುದೇ ಲಕ್ಷಣಗಳಿಲ್ಲ. ಆದರೂ ಅವರು ಕುಡಿದ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಗಾಯತ್ರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಗ್ರಾಮಕ್ಕೆ ಭೇಟಿ ನೀಡಿ ಊರಿನ ಸ್ವಚ್ಛತೆ ಪರಿಶೀಲಿಸಿದ್ದಾರೆ. ವೈದ್ಯ ಸಿಬ್ಬಂದಿ ಕೂಡ ಗ್ರಾಮದಲ್ಲೇ ಬೀಡು ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.