ಕಮಲನಗರ: ತಾಲ್ಲೂಕಿನ ಕರಕ್ಯಾಳ ಗ್ರಾಮದ ಮಹಿಳೆ ಯೊಬ್ಬರು ಶನಿವಾರ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ. ನೀಲಾಬಾಯಿ ಬಾಲಾಜಿ(35) ಮೃತರು.
ಹಾವು ಕಚ್ಚಿದ ತಕ್ಷಣ ಚಿಕಿತ್ಸೆಗಾಗಿ ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.