ಬೀದರ್: ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಸಹಕಾರ ರಂಗ ಮಾದರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಮಹಾಜನ ನುಡಿದರು.
ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ನಬಾರ್ಡ್ ವತಿಯಿಂದ ಹಮ್ಮಿಕೊಂಡಿರುವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರ ರಂಗವು ಎಲ್ಲ ವರ್ಗದ ಜನರನ್ನು ಒಳಗೊಂಡ ಆಂದೋಲನವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸೃಷ್ಟಿಸಲು ಸಹಕಾರಿಯಾಗಿದೆ. ಕೃಷಿ ಹಾಗೂ ಇತರ ಕ್ಷೇತ್ರಗಳಲ್ಲಿ ಸಹಕಾರ ರಂಗದ ಸಾಧನೆಗಳು ಉನ್ನತವಾಗಿವೆ ಎಂದು ಹೇಳಿದರು.
ಆಡಳಿತ ಮಂಡಳಿಯಲ್ಲಿ ಕೌಟುಂಬಿಕ ಭಾವನೆ ಮೂಡಿದ್ದಲ್ಲಿ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.
ಉಪನ್ಯಾಸಕ ಮಂಜುನಾಥ ಭಾಗವತ್ ತರಬೇತಿ ಉದ್ದೇಶ ವಿವರಿಸಿದರು. ಶಿವಮೊಗ್ಗ ಸಹಕಾರ ಸಂಘದ ಅಧ್ಯಕ್ಷ ನೀಲಪ್ಪ ಉಪಸ್ಥಿತರಿದ್ದರು.
ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ್ ಪಿ. ನಿರೂಪಿಸಿದರು. ಎಸ್.ಜಿ. ಪಾಟೀಲ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.