ADVERTISEMENT

ಸಾಮಾಜಿಕ ಸುಧಾರಣೆಗೆ ಶಿಕ್ಷಣ ಪದ್ಧತಿ ಬದಲಾವಣೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 16:02 IST
Last Updated 22 ಡಿಸೆಂಬರ್ 2021, 16:02 IST
ಬೀದರ್ ತಾಲ್ಲೂಕಿನ ನಾಗೋರಾ ಗ್ರಾಮದಲ್ಲಿ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ನಡೆದ ವಿಚಾರ ಸಂಕಿರಣದಲ್ಲಿ ಸಾಹಿತಿ ಶಿವಕುಮಾರ ಕಟ್ಟೆ ಮಾತನಾಡಿದರು. ಗುರುನಾಥ ರಾಜಗೀರಾ, ಗಾಯತ್ರಿ, ರಮೇಶ ಬಿರಾದಾರ, ಭೀಮಾಶಂಕರ ಅಡ್ಡೆ, ಅಬರೀಷ್ ಬಟನಾಪುರೆ ಇದ್ದರು
ಬೀದರ್ ತಾಲ್ಲೂಕಿನ ನಾಗೋರಾ ಗ್ರಾಮದಲ್ಲಿ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ನಡೆದ ವಿಚಾರ ಸಂಕಿರಣದಲ್ಲಿ ಸಾಹಿತಿ ಶಿವಕುಮಾರ ಕಟ್ಟೆ ಮಾತನಾಡಿದರು. ಗುರುನಾಥ ರಾಜಗೀರಾ, ಗಾಯತ್ರಿ, ರಮೇಶ ಬಿರಾದಾರ, ಭೀಮಾಶಂಕರ ಅಡ್ಡೆ, ಅಬರೀಷ್ ಬಟನಾಪುರೆ ಇದ್ದರು   

ಜನವಾಡ: ಸಾಮಾಜಿಕ ಸುಧಾರಣೆಗೆ ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆ ಅಗತ್ಯವಾಗಿದೆ ಎಂದು ಸಾಹಿತಿ ಶಿವಕುಮಾರ ಕಟ್ಟೆ ಅಭಿಪ್ರಾಯಪಟ್ಟರು.

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜಗೀರಾದ ಮಾತೃಭೂಮಿ ಸೇವಾ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಬೀದರ್ ತಾಲ್ಲೂಕಿನ ನಾಗೋರಾದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಸುಸಂಸ್ಕೃತ ಶಿಕ್ಷಣ ಸಿಗದ ಕಾರಣ ಇಂದು ಸಮಾಜದಲ್ಲಿ ಸುಶಿಕ್ಷಿತರಿಂದಲೇ ಹೆಚ್ಚು ಸಮಾಜಘಾತುಕ ಚಟುವಟಿಕೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ADVERTISEMENT

ಗಡಿ ಎನ್ನುವುದು ಆಡಳಿತಾತ್ಮಕ ಹಿತದೃಷ್ಟಿಯಿಂದ ಮಾಡಿಕೊಂಡ ವ್ಯವಸ್ಥೆಯಾಗಿದೆ. ಆದರೆ, ರಾಜ್ಯದ ಕೆಲವೆಡೆ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಸಮಾಜದ ಶಾಂತಿ ಕದಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.

ಸಾಹಿತಿ ರಮೇಶ ಬಿರಾದಾರ, ಸಾಮಾಜಿಕ ಕಾರ್ಯಕರ್ತ ವೀರೇಶ ಸ್ವಾಮಿ ವಿಶೇಷ ಉಪನ್ಯಾಸ ನೀಡಿದರು. ಕಲಾವಿದ ಮಲ್ಲಿಕಾರ್ಜುನ ಗರಗಪಳ್ಳಿ ಹಾಗೂ ಮಲ್ಲಿಕಾರ್ಜುನ ನಾಗಮಾರಪಳ್ಳಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಹೊಸಮನಿ, ಬಸವ ಪ್ರೌಢಶಾಲೆ ಮುಖ್ಯಶಿಕ್ಷಕ ಭೀಮಾಶಂಕರ ಅಡ್ಡೆ, ನಂದೇಶ, ಅಂಬರೀಷ ಬಟನಾಪುರೆ, ಬಸವ ಮೂಲಗೆ, ತುಳಜಪ್ಪ ಬುಧೇರಾ, ನರಸಪ್ಪ ಜಾನಕನೋರ, ಉದಯಕುಮಾರ, ಚಂದ್ರಶೇಖರ ಪಾಟೀಲ, ಸಂಜುಕುಮಾರ ಕೋಳಿ, ಆಕಾಶ ಮಮದಾಪುರೆ, ಶಿವಕುಮಾರ ಯದಲಾಪುರೆ, ಅನಂತರಾವ್ ಕುಲಕರ್ಣಿ, ಶಿವಕುಮಾರ ಇದ್ದರು.

ಮಾತೃಭೂಮಿ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ಗುರುನಾಥ ರಾಜಗೀರಾ ಸ್ವಾಗತಿಸಿದರು. ಮಹಾದೇವ ನಿರೂಪಿಸಿದರು. ವಿನೋದ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.