ADVERTISEMENT

ಯೋಧರು ದೇಶದ ನಿಜವಾದ ಹಿರೋಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ: ಪ್ರೊ. ಉಮಾಕಾಂತ ಮೀಸೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 14:16 IST
Last Updated 1 ಆಗಸ್ಟ್ 2022, 14:16 IST
ಬೀದರ್‌ನ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರೊ. ಉಮಾಕಾಂತ ಮೀಸೆ ಸಸಿಗೆ ನೀರೆರೆದು ಉದ್ಘಾಟಿಸಿದರು
ಬೀದರ್‌ನ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರೊ. ಉಮಾಕಾಂತ ಮೀಸೆ ಸಸಿಗೆ ನೀರೆರೆದು ಉದ್ಘಾಟಿಸಿದರು   

ಬೀದರ್: ಗಡಿ ಕಾಯುವ ಯೋಧರೇ ದೇಶದ ನಿಜವಾದ ಹಿರೋಗಳು ಎಂದು ಪ್ರೊ. ಉಮಾಕಾಂತ ಮೀಸೆ ಬಣ್ಣಿಸಿದರು.

ಇಲ್ಲಿಯ ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಸಿಗೆ ನೀರೆರೆದು ಉದ್ಘಾಟಿಸಿ ಅವರು ಮಾತನಾಡಿದರು.

ಯೋಧರು ಮನೆ, ಮಠ ಬಿಟ್ಟು ಗಡಿ ಕಾಯುತ್ತಿರುವುದರಿಂದಲೇ ದೇಶದ ಜನ ಶಾಂತಿ, ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದು ಹೇಳಿದರು.

ADVERTISEMENT

ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ನುಡಿದರು.
ಯುವಕರು ದೇಶ ಪ್ರೇಮ, ದೇಶಾಭಿಮಾನ ಮೈಗೂಡಿಸಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷ ಮಂಗಳೂರೆ ಹೇಳಿದರು.

ಶಿಕ್ಷಕರಾದ ಪುರುಷೋತ್ತಮ, ಸುವರ್ಣ ಪಾಟೀಲ, ಸಾರಿಕಾ ಬಿರಾದಾರ, ಸಪ್ನಾರಾಣಿ ಪಾಟೀಲ. ಸುನಿತಾ ಕಾಜಿ, ಪೂಜಾ ಕಡ್ಡೆ, ಚಂದ್ರಕಲಾ ಸ್ವಾಮಿ, ಮೇಘಾ ಕಾಜಿ, ಸುಧಾ ಉಪ್ಪೆ, ರೇಖಾ ಪಾಟೀಲ, ಪಾರ್ವತಿ ಬಿರಾದಾರ, ಶೈಲಜಾ ಸ್ವಾಮಿ, ಪೂಜಾ ರಾಣಿ, ಅನುಸೂಯಾ, ಮಾರುತೆಪ್ಪ ಗೌನಳ್ಳಿ ಇದ್ದರು

ನೀಲಮ್ಮ ಗಜಲೆ ನಿರೂಪಿಸಿದರು. ಅರುಣೋದಯ ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ ಸ್ವಾಗತಿಸಿದರು. ಅರುಣೋದಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ ವಂದಿಸಿದರು.
ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.