ADVERTISEMENT

ಬೆಂಬಲ ಬೆಲೆಯಲ್ಲಿ ಸೋಯಾಬೀನ್ ಖರೀದಿ

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2018, 14:42 IST
Last Updated 27 ಅಕ್ಟೋಬರ್ 2018, 14:42 IST
ಬಂಡೆಪ್ಪ ಕಾಶೆಂಪುರ
ಬಂಡೆಪ್ಪ ಕಾಶೆಂಪುರ   

ಬೀದರ್: ‘ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಗರಿಷ್ಠ ಹತ್ತು ಕ್ವಿಂಟಲ್ ಸೋಯಾಬೀನ್
ಖರೀದಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.

‘ಪ್ರಸಕ್ತ ಮಾರುಕಟ್ಟೆಯಲ್ಲಿ ಸೋಯಾಬಿನ್ ಬೆಲೆ ಪ್ರತಿ ಕ್ವಿಂಟಲ್‌ಗೆ ₹ 2,820 ರಿಂದ ₹3,100 ಇದೆ. ಗುಣಮಟ್ಟದ ಸೋಯಾಬೀನ್ ಖರೀದಿಸಲು ನೋಂದಣಿಗೆ 10 ದಿನಗಳ ಅವಕಾಶ ನೀಡಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಖರೀದಿ ಮಾಡಲಾಗುವುದು’ ಎಂದು ಹೇಳಿದ್ದಾರೆ.

‘ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಸಲು ಕೇಂದ್ರ ಸರ್ಕಾರ ಗರಿಷ್ಠ ₹23,250 ಮೆಟ್ರಿಕ್ ಟನ್ ಪ್ರಮಾಣ ಹಾಗೂ 90 ದಿನಗಳ ಕಾಲಾವಕಾಶ ನೀಡಿತ್ತು. ಈಗಾಗಲೇ ಶೇಕಡ 90ರಷ್ಟು ಖರೀದಿ ಮಾಡಲಾಗಿದೆ. ಹೆಚ್ಚುವರಿ ಕಾಲಾವಕಾಶಕ್ಕಾಗಿ ಕೇಂದ್ರ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷರಾಗಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆಯಲಾಗುವುದು. ನವೆಂಬರ್ 2 ರಂದು ದೆಹಲಿಗೆ ತೆರಳಿ, ಮನವಿ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.