
ಹುಮನಾಬಾದ್: ಈಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಾಲ್ಲೂಕಿನ ನಾಲ್ಕು ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಬಿಇಒ ವೆಂಕಟೇಶ್ ಗೂಡಾಳ್ ತಿಳಿಸಿದರು.
ಪಟ್ಟಣದಲ್ಲಿನ ಬಿಆರ್‌ಸಿ ಕೇಂದ್ರದಲ್ಲಿ ನಡೆದ ಶಾಲೆಯ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.
‘ಮೇ 26ರಿಂದ ಎಸ್‌ಎಸ್ಎಲ್‌ಸಿ-2 ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮೇ15 ರಿಂದ 25ವರೆಗೆ ಹತ್ತು ದಿನ ವಿಶೇಷ ತರಗತಿಗಳು ನಡೆಸಲಾಗುವುದು. ಶಿಕ್ಷಕರು ಈ ತರಬೇತಿಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು’ ಎಂದರು.
ಈ ಸಂದರ್ಭದಲ್ಲಿ ಪ್ರೀತಂ ಸಿಂಗ್, ಗಜೇಂದ್ರ ರಾವ್, ಮಹಮ್ಮದ್ ರಫೀಕ್ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.