ADVERTISEMENT

ಭಾಲ್ಕಿ | ವಿಶೇಷ ಬೇಸಿಗೆ ಶಿಬಿರ ಮೇ15ರಿಂದ

​ಪ್ರಜಾವಾಣಿ ವಾರ್ತೆ
Published 13 ಮೇ 2025, 14:53 IST
Last Updated 13 ಮೇ 2025, 14:53 IST

ಭಾಲ್ಕಿ: ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕಿನ 8, 9 ಮತ್ತು 10ನೇ ತರಗತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮೇ 15ರಿಂದ 25ರವರೆಗೆ ವಿಶೇಷ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು ಶಿಬಿರದಲ್ಲಿ ಸಂಗೀತ, ಚಿತ್ರಕಲೆ, ಯೋಗ, ಧ್ಯಾನ, ವ್ಯಾಯಾಮ, ಸೇರಿದಂತೆ ಇತರೆ ಪಠ್ಯೇತರ ಚಟುವಟಿಕೆಗಳನ್ನು ನುರಿತ ತಜ್ಞರಿಂದ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿ ಚೇತನಾ ಚನಶೆಟ್ಟಿ ಅವರ ಮೊಬೈಲ್ ಸಂಖ್ಯೆ 9900245879 ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ದೂರವಾಣಿ ಸಂಖ್ಯೆ 9620663666 ಕ್ಕೆ ಸಂಪರ್ಕಿಸಲು ಕೋರಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.