ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮೇ 12ರಂದು ನಗರದ ಜನವಾಡ ರಸ್ತೆಯಲ್ಲಿರುವ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಕೇಂದ್ರ ಪಾವನಧಾಮ ಆವರಣದಲ್ಲಿ 'ಆಧ್ಯಾತ್ಮಿಕ ಸಬಲೀಕರಣ ಹಾಗೂ ಸಹಾನುಭೂತಿ' ಅಭಿಯಾನ ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಭಿಯಾನಕ್ಕೆ ಚಾಲನೆ ನೀಡುವರು. ಪ್ರಜಾಪಿತಾ ಬ್ರಹ್ಮಕುಮಾರಿ ಕೇಂದ್ರ ಪಾವನಧಾಮದ ಸಂಚಾಲಕಿ ಬಿ.ಕೆ ಪ್ರತಿಮಾ ಬಹೆನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ ಬಾಬು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ್ ಹಾಗೂ ಶಾಹೀನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಸಿದ್ದರಾಮ ಶರಣರು ಹಾಗೂ ಗುರಮ್ಮ ಸಿದ್ಧಾರೆಡ್ಡಿ ಅವರನ್ನು ಸನ್ಮಾನಿಸಲಾಗುವುದು ಎಂದು ಬಿ.ಕೆ ಪ್ರತಿಮಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.