ADVERTISEMENT

ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಜಿಲ್ಲಾ ಪೊಲೀಸ್ ಕ್ರೀಡಾಕೂಟ ಸಮಾರೋಪದಲ್ಲಿ ಜಿಲ್ಲಾಧಿಕಾರಿ ಅಭಿಮತ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 15:47 IST
Last Updated 7 ಡಿಸೆಂಬರ್ 2021, 15:47 IST
ಬೀದರ್‌ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಪಡೆದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತಂಡ
ಬೀದರ್‌ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಪಡೆದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತಂಡ   

ಬೀದರ್: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು.

ಇಲ್ಲಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಮಾತನಾಡಿ, ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.

ADVERTISEMENT

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ್, ಡಿವೈಎಸ್‍ಪಿಗಳಾದ ಸತೀಶ ಕೆ.ಎಂ, ಸೋಮಲಿಂಗ ಕುಂಬಾರ, ಪ್ರತೀಕ ಶಂಕರ, ಸುನೀಲ್ ಕೊಡ್ಲಿ, ಸಿಪಿಐಗಳಾದ ರಾಮಪ್ಪ ಸಾವಳಗಿ, ಶ್ರೀಕಾಂತ ಅಲ್ಲಾಪುರೆ, ಮಲ್ಲಿಕಾರ್ಜುನ ಯಾತನೂರ, ವೀರಣ್ಣ, ಗೋಪಾಲ ನಾಯಕ್, ಪಾಲಾಕ್ಷಯ್ಯ ಹಿರೇಮಠ, ಮೋಶಿನ್ ಪಟೇಲ್, ಪಿಎಸ್‍ಐ ಶಿವರಾಜ ಪಾಟೀಲ ಇದ್ದರು.

ಓಟ, ಜಾವೆಲಿನ್ ಥ್ರೋ, ವಾಲಿಬಾಲ್, ಹಗ್ಗಜಗ್ಗಾಟ, ಕಬಡ್ಡಿ, ಕ್ರಿಕೇಟ್ ಸೇರಿದಂತೆ ವಿವಿಧ ಪಂದ್ಯಾವಳಿಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತಂಡವು ಕ್ರೀಡಾಕೂಟದ ಚಾಂಪಿಯನ್ ಪಟ್ಟ ಗಿಟ್ಟಿಸಿತು.

ಅನಿಲ್ ರಾಠೋಡ್ ಅವರು ಪುರುಷರ ವಿಭಾಗದಲ್ಲಿ ಅತಿ ಹೆಚ್ಚು ಹಾಗೂ ಮಹೇಶ್ವರಿ ಅವರು ಮಹಿಳೆಯರ ವಿಭಾಗದಲ್ಲಿ ಅತಿ ಹೆಚ್ಚು ಬಹುಮಾನ ಪಡೆದ ಕೀರ್ತಿಗೆ ಪಾತ್ರರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.