ಬೀದರ್: ನಗರದ ನೆಹರೂ ಕ್ರೀಡಾಂಗಣದ ಕ್ರೀಡಾ ಸಮುಚ್ಚಯದ ಪರಿಸರದಲ್ಲಿ ₹3.25 ಕೋಟಿ ಮೊತ್ತದ ಕ್ರೀಡಾ ವಸತಿ ನಿಲಯದ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
‘ಕ್ರೀಡಾ ವಸತಿ ನಿಲಯದಿಂದ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಉತ್ತಮ ಕ್ರೀಡಾಪಟುಗಳಿಗೆ ತರಬೇತಿಗೆ ಅನುಕೂಲವಾಗಲಿದೆ. ಸುಮಾರು 75ರಿಂದ 100 ಕ್ರೀಡಾಪಟುಗಳು ವಸತಿ ನಿಲಯದಲ್ಲಿ ವಾಸ್ತವ್ಯ ಮಾಡಬಹುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಉತ್ತಮ ಕ್ರೀಡಾಪಟುಗಳನ್ನು ಸಿದ್ಧ ಮಾಡಬೇಕಾಗಿದೆ’ ಎಂದು ಖಂಡ್ರೆ ಹೇಳಿದರು.
ಪೌರಾಡಳಿತ ಸಚಿವ ರಹೀಂ ಖಾನ್, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ ಸೇರಿದಂತೆ ಕ್ರೀಡಾಭಿಮಾನಿಗಳು, ಕ್ರೀಡಾಸ್ತಕರು ಹಾಜರಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.