ADVERTISEMENT

ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವೀರಶೆಟ್ಟಿ ಖ್ಯಾಮಾ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 8:15 IST
Last Updated 22 ಸೆಪ್ಟೆಂಬರ್ 2022, 8:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀದರ್: ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷ, ಭಾರತೀಯ ಗೋ ಪರಿವಾರದ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಶೆಟ್ಟಿ ಖ್ಯಾಮಾ (38) ಅವರ ಮೇಲೆ ಬುಧವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

ಖ್ಯಾಮಾ ಅವರ ಸ್ವಗ್ರಾಮ ಬೀದರ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅದೇ ಗ್ರಾಮದ ಧನರಾಜ ಹಾಗೂ ಇತರರು ಕೊಡಲಿಯಿಂದ ಖ್ಯಾಮಾ ಅವರ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಖ್ಯಾಮಾ ಅವರ ಬೆನ್ನು, ಕೈ ಇತರೆಡೆ ಗಾಯಗಳಾಗಿದ್ದುಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ADVERTISEMENT

ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.