ADVERTISEMENT

ಶ್ರೀರಂಗಗೆ ಸಿದ್ಧಗಂಗಾ ಸಂಘದಿಂದ ಸನ್ಮಾನ

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 16:52 IST
Last Updated 18 ಜುಲೈ 2020, 16:52 IST
ಬೀದರ್‌ನ ನೌಬಾದ್‌ನಲ್ಲಿ ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 96 ರಷ್ಟು ಅಂಕ ಗಳಿಸಿ ಸಾಧನೆಗೈದ ಜ್ಞಾನಸುಧಾ ವಿದ್ಯಾಲಯದ ವಿದ್ಯಾರ್ಥಿ ಶ್ರೀರಂಗ ಗುಣವಂತರಾವ್ ಸಿಂದೆ ಅವರನ್ನು ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಶಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಬೀದರ್‌ನಲ್ಲಿ ಶನಿವಾರ ಸನ್ಮಾನಿಸಲಾಯಿತು

ಬೀದರ್: ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 96 ರಷ್ಟು ಅಂಕ ಪಡೆದು ಸಾಧನೆಗೈದ ನಗರದ ಜ್ಞಾನಸುಧಾ ವಿದ್ಯಾಲಯದ ವಿದ್ಯಾರ್ಥಿ ಭಾಲ್ಕಿ ತಾಲ್ಲೂಕಿನ ತೇಗಂಪುರದ ಶ್ರೀರಂಗ ಗುಣವಂತರಾವ್ ಸಿಂದೆ ಅವರನ್ನು ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಶಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಶನಿವಾರ ಸನ್ಮಾನಿಸಲಾಯಿತು.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನೌಬಾದ್‍ನ ವಿದ್ಯಾರ್ಥಿಯ ಮನೆಗೆ ತೆರಳಿ ಶಾಲು ಹೊದಿಸಿ ಸನ್ಮಾನಿಸಿದರು.

ಸಿಬಿಎಸ್‍ಇ 10ನೇ ತರಗತಿಯಲ್ಲಿ ಸಾಧನೆಗೈದಿರುವ ಶ್ರೀರಂಗ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ತಿಳಿಸಿದರು.

ADVERTISEMENT

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ, ಮೊಗಲಪ್ಪ ನಂದ್ಯಾಳ, ಗುಣವಂತರಾವ್ ಸಿಂದೆ, ಪ್ರಶಾಂತ ಬಿರಾದಾರ, ಬಜರಂಗ ಸಿಂದೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.