ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪೂರ್ವಸಿದ್ಧತೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 9:10 IST
Last Updated 20 ಜೂನ್ 2020, 9:10 IST
ಬೀದರ್‌ನಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ 2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದ ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ₹25 ಸಾವಿರ ಚೆಕ್ ಹಾಗೂ ಅಭಿನಂದನಾ ಫಲಕ ವಿತರಿಸಿದರು

ಬೀದರ್: ‘ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.‘ಕೋವಿಡ್ 19 ಪ್ರಯುಕ್ತ ಮುಂದೂಡಲಾದ ಪರೀಕ್ಷೆಗಳು ಭಯಮುಕ್ತ ಹಾಗೂ ನಕಲು ಮುಕ್ತವಾಗಿ ನಡೆಯಬೇಕು. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆದಲ್ಲಿ ಫಲಿತಾಂಶದಲ್ಲಿ ಜಿಲ್ಲೆಗೆ ಉತ್ತಮ ಸ್ಥಾನ ಲಭಿಸಲಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 4 ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 26,882 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು 99 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಸಿ. ಚಂದ್ರಶೇಖರ ತಿಳಿಸಿದರು.

ADVERTISEMENT

‘ಕೋವಿಡ್ 19 ಸೋಂಕಿನ ಕಾರಣ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ವಿತರಿಸಲಾಗಿದೆ. 200 ವಿದ್ಯಾರ್ಥಿಗಳಿಗೆ ಒಂದರಂತೆ 218 ಧರ್ಮಲ್ ಸ್ಕ್ಯಾನರ್‌ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.