ADVERTISEMENT

SSLC result| 2 ಸ್ಥಾನ ಜಿಗಿತ ಕಂಡ ಬೀದರ್‌; ಕಲ್ಯಾಣ ಕರ್ನಾಟಕದಲ್ಲಿ 3ನೇ ಸ್ಥಾನ‌

​ಪ್ರಜಾವಾಣಿ ವಾರ್ತೆ
Published 2 ಮೇ 2025, 7:08 IST
Last Updated 2 ಮೇ 2025, 7:08 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೀದರ್‌: 2024–25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಘೋಷಣೆಯಾಗಿದ್ದು, ಬೀದರ್‌ ಜಿಲ್ಲೆ ರಾಜ್ಯದ ಪಟ್ಟಿಯಲ್ಲಿ ಎರಡು ಸ್ಥಾನ ಜಿಗಿತ ಕಂಡಿದೆ. ಕಲ್ಯಾಣ ಕರ್ನಾಟಕದಲ್ಲಿ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಮೊದಲ ಸ್ಥಾನದಲ್ಲಿ ವಿಜಯನಗರ, ಎರಡನೇ ಸ್ಥಾನದಲ್ಲಿ ಬಳ್ಳಾರಿ ಜಿಲ್ಲೆಯಿದೆ. ರಾಜ್ಯದ ಪಟ್ಟಿಯಲ್ಲಿ ಬೀದರ್‌ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಎರಡು ಸ್ಥಾನ ಜಿಗಿದಿದೆ. ಹೋದ ವರ್ಷ 33ನೇ ಸ್ಥಾನದಲ್ಲಿತ್ತು. ಅದಕ್ಕಿಂತಲೂ ಹಿಂದಿನ ವರ್ಷ 34ನೇ ಸ್ಥಾನದಲ್ಲಿತ್ತು.

ADVERTISEMENT

ಬೀದರ್‌ ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 23,754 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 12,650 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶೇ 53.25ರಷ್ಟು ಒಟ್ಟು ಫಲಿತಾಂಶ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.