ADVERTISEMENT

ಡಿ.2ರಿಂದ ಬೀದರ್‌– ಬೆಂಗಳೂರು ನಡುವೆ ವಿಮಾನ ಹಾರಾಟ ಆರಂಭ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 14:44 IST
Last Updated 29 ನವೆಂಬರ್ 2021, 14:44 IST
ಟ್ರುಜೆಟ್‌
ಟ್ರುಜೆಟ್‌   

ಬೀದರ್‌: ಡಿಸೆಂಬರ್‌ 2ರಿಂದ ಬೀದರ್‌– ಬೆಂಗಳೂರು ನಡುವೆ ವಿಮಾನ ಯಾನ ಸೇವೆ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ತಿಳಿಸಿದ್ದಾರೆ.

ಜಿಎಂಆರ್‌ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಲಾಗಿದೆ. ಡಿಸೆಂಬರ್ 2ರಿಂದ ವಿಮಾನ ಸೇವೆ ಆರಂಭಿಸಲಾಗುವುದೆಂದು ಟ್ರುಜೆಟ್‌ ಕಾರ್ಯಾಚರಣೆ ವಿಭಾಗದ ವ್ಯವಸ್ಥಾಪಕ ಪ್ರಸಾದ ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಟ್ರುಜೆಟ್‌ ಸರಿಯಾಗಿ ಸೇವೆ ಕೊಡುತ್ತಿಲ್ಲ ಎಂದು ಪ್ರಯಾಣಿಕರು ಬುಕ್‌ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರಯಾಣಿಕರ ಕೊರತೆ ಕಾರಣ ಕೊನೆಯ ಕ್ಷಣಗಳಲ್ಲಿ ಟ್ರುಜೆಟ್‌ ಮುನ್ಸೂಚನೆ ನೀಡದೆ ವಿಮಾನ ಹಾರಾಟ ಸ್ಥಗಿತಗೊಳಿಸುತ್ತಿದೆ ಎನ್ನುವ ವಿಷಯಗಳು ಸಭೆಯಲ್ಲಿ ಪ್ರಸ್ತಾಪವಾಗಿವೆ. ಎಲ್ಲವನ್ನೂ ಸರಿಪಡಿಸಿ ಮತ್ತೆ ವಿಮಾನ ಸೇವೆ ಆರಂಭಿಸುವ ಭರವಸೆಯನ್ನು ಟ್ರುಜೆಟ್‌ನ ಅಧಿಕಾರಿಗಳು ನೀಡಿದ್ದಾರೆ.

ADVERTISEMENT

ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಂಸದ ಭಗವಂತ ಖೂಬಾ ಅವರು ಕೇಂದ್ರ ಸಚಿವರಾದ ಮೇಲೆ ವಿಮಾನ ಸೇವೆ ಬಂದ್‌ ಆಗಿದೆ ಎಂದು ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.