ADVERTISEMENT

ರಾಜ್ಯಮಟ್ಟದ ಡಾ.ಪಂಡಿತ ಪುಟ್ಟರಾಜ ಸಾಹಿತ್ಯೋತ್ಸವ 26ಕ್ಕೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 4:15 IST
Last Updated 24 ಸೆಪ್ಟೆಂಬರ್ 2021, 4:15 IST

ಬೀದರ್: ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಜಿಲ್ಲಾ ಘಟಕದ ವತಿಯಿಂದ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಸೆ. 26 ರಂದು ರಾಜ್ಯಮಟ್ಟದ ಡಾ. ಪಂಡಿತ ಪುಟ್ಟರಾಜ ಸಾಹಿತ್ಯೋತ್ಸವ ಹಮ್ಮಿಕೊಳ್ಳಲಾಗಿದೆ.

ಸಾಹಿತ್ಯೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಹಾಗೂ ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಸ್ವಾಮಿ ಚೀನಕೇರಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಸಾಹಿತ್ಯೋತ್ಸವದ ವಿವರ ನೀಡಿದರು.

ಬೆಳಿಗ್ಗೆ 10ಕ್ಕೆ ನಡೆಯುವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸಾಹಿತ್ಯೋತ್ಸವ ಉದ್ಘಾಟಿಸುವರು. ಹುಲಸೂರಿನ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೆಂಭಾವಿ ಹಿರೇಮಠದ ಚನ್ನಬಸವ ಸ್ವಾಮೀಜಿ ನೇತೃತ್ವ ವಹಿಸುವರು. ಗದಗಿನ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಆಶಯ ನುಡಿ ಆಡುವರು ಎಂದು ಹೇಳಿದರು.

ADVERTISEMENT

ಮುಖ್ಯ ಅತಿಥಿಗಳಾಗಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಬಸವ ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕ ರಮೇಶ ಮಠಪತಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಸ್ವಾಮಿ ಚೀನಕೇರಿ ಅಧ್ಯಕ್ಷತೆ ವಹಿಸುವರು. ರಮೇಶ ಎಸ್. ಕತ್ತಿ ಕಡಣಿ ಅವರ ಕತ್ತಿಯ ಅಲಗು ಕೃತಿಗೆ ರಾಜ್ಯಮಟ್ಟದ ಡಾ. ಪಂಡಿತ ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಮಧ್ಯಾಹ್ನ 12.30ಕ್ಕೆ ಗುರು ಗುಣಗಾನ, ಮಧ್ಯಾಹ್ನ 3ಕ್ಕೆ ಗುರುವಚನ ಪ್ರಭಾ ಗೋಷ್ಠಿ, ಸಂಜೆ 5ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ.

ಕಲಾವಿದ ವೈಜಿನಾಥ ಸಜ್ಜನಶೆಟ್ಟಿ ವಚನ ಗಾಯನ ಹಾಗೂ ರೇವಣಸಿದ್ದಯ್ಯ ಹಿರೇಮಠ ಮತ್ತು ಜನಾರ್ಧನ ವಾಘಮಾರೆ ಅವರು ವಿಶೇಷ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು ಎಂದು ತಿಳಿಸಿದರು.

ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಾಬುರಾವ್ ದಾನಿ, ಬಸವ ಕೇಂದ್ರ ಟ್ರಸ್ಟ್ ಅಧ್ಯಕ್ಷ ಪ್ರಭುರಾವ್ ವಸ್ಮತೆ, ಸರ್ಕಾರಿ ಐಟಿಐ ಪ್ರಾಚಾರ್ಯ ಶಿವಶಂಕರ ಟೋಕರೆ, ವೈಜಿನಾಥ ಸಜ್ಜನಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.