ADVERTISEMENT

‘ಬೀದರ್ ಉತ್ಸವ’ಕ್ಕೆ ತಡೆ: ಮುಖ್ಯಮಂತ್ರಿ ಭರವಸೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2018, 15:51 IST
Last Updated 13 ಡಿಸೆಂಬರ್ 2018, 15:51 IST
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಅರವಿಂದಕುಮಾರ ಅರಳಿ, ವಿಜಯಸಿಂಗ್‌ ಹಾಗೂ ಡಾ. ಚಂದ್ರಶೇಖರ ಪಾಟೀಲ ಅವರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಅರವಿಂದಕುಮಾರ ಅರಳಿ, ವಿಜಯಸಿಂಗ್‌ ಹಾಗೂ ಡಾ. ಚಂದ್ರಶೇಖರ ಪಾಟೀಲ ಅವರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು   

ಬೀದರ್: ‘ಬೀದರ್ ಉತ್ಸವಕ್ಕೆ ತಡೆ ಒಡ್ಡಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್‌ ಹಾಗೂ ಡಾ. ಚಂದ್ರಶೇಖರ ಪಾಟೀಲ ಅವರೊಂದಿಗೆ ಬೆಳಗಾವಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಈ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

‘ಬರದ ಕಾರಣ ಜಿಲ್ಲೆಯಲ್ಲಿ ರೈತರು ಹಿಂಗಾರು ಹಾಗೂ ಮುಂಗಾರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಕೂಲಿ ಕಾರ್ಮಿಕರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದಾರೆ. ಕುಡಿಯುವ ನೀರು, ಮೇವಿಗೆ ಸಮಸ್ಯೆ ಎದುರಾಗಿದೆ. ಹೀಗಾಗಿ ಬೀದರ್ ಉತ್ಸವ ಆಚರಿಸಿ ಸಂಭ್ರಮಿಸುವುದು ಬೇಡ ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಬೀದರ್ ಜಿಲ್ಲೆಯಲ್ಲಿ ಬರಗಾಲ ಇರುವುದು ಗಮನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಬೀದರ್ ಉತ್ಸವ ಆಚರಿಸುವುದು ಸರಿಯಲ್ಲ. ಸಂಬಂಧಪಟ್ಟವರಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಅವರು ಆಶ್ವಾಸನೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.