ಬಸವಕಲ್ಯಾಣ: ಜೂನ್ 6ರಂದು ಹಮ್ಮಿಕೊಳ್ಳುವ ಬಕ್ರೀದ್ ಹಬ್ಬಕ್ಕೆ ನಡೆಯುವ ಗೋಹತ್ಯೆ ಹಾಗೂ ಗೋವುಗಳ ಸಾಗಾಟ ತಡೆಯಬೇಕು ಎಂದು ಆಗ್ರಹಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿ ಮುಕುಲ್ ಜೈನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ, ಬಕ್ರೀದ್‌ಗೆ ಪ್ರಾಣಿಗಳ ಹತ್ಯೆ ನಡೆಯುತ್ತದೆ. ಆದ್ದರಿಂದ ಸಂಬಂಧಿತರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸರಹದ್ದಿನಲ್ಲಿನ ಸಾರಿಗೆ ಇಲಾಖೆ ಕಚೇರಿಗಳ ಹತ್ತಿರದಲ್ಲಿ ಎಲ್ಲ ವಾಹನಗಳ ತಪಾಸಣೆ ನಡೆಸಿ ಗೋವುಗಳನ್ನು ಸಾಗಿಸದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಲಾಗಿದೆ.
ಬಜರಂಗದಳ ತಾಲ್ಲೂಕು ಸಂಚಾಲಕ ರವಿ ನಾವದ್ಗೇಕರ್, ವಿಶ್ವ ಹಿಂದೂ ಪರಿಷತ್ ಸಂಚಾಲಕ ಶ್ರೀಶೈಲ್ ವಾತಡೆ, ಪ್ರಕಾಶ ನಿರಾಳೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.