ADVERTISEMENT

ಬಸವಕಲ್ಯಾಣ: ಚಿನ್ನಾಭರಣ ದೋಚಿದ ಅಪರಿಚಿತರು

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 6:31 IST
Last Updated 28 ಡಿಸೆಂಬರ್ 2021, 6:31 IST

ಬಸವಕಲ್ಯಾಣ: ನಗರದ ತ್ರಿಪುರಾಂತದಲ್ಲಿ ಅಂಗನವಾಡಿ ಕಾರ್ಯಕರ್ತೆ ವಿಜಯಕುಮಾರಿ ಅವರ ಕೊರಳಲ್ಲಿನ 50 ಗ್ರಾಂ ಚಿನ್ನಾಭರಣವನ್ನು ಅಪರಿಚಿತರು ದೋಚಿ ಪರಾರಿಯಾದ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಈ ಘಟನೆ ನಡೆದಿದ್ದು ಅಂಗನವಾಡಿ ಕಾರ್ಯಕರ್ತೆ ಹಾಗೂ ಇನ್ನೊಬ್ಬ ಮಹಿಳೆ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಚಿನ್ನಾಭರಣ ದೋಚಲಾಗಿದೆ. ಒಟ್ಟು ₹ 2.40 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT