ADVERTISEMENT

ರಕ್ತಹೀನತೆ ತಡೆಗೆ ಶ್ರಮಿಸಿ: ರತ್ನಾಕರ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 5:58 IST
Last Updated 3 ಅಕ್ಟೋಬರ್ 2021, 5:58 IST

ಬೀದರ್: ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿ ಹಾಗೂ ಬಾಣಂತಿಯರಲ್ಲಿ ರಕ್ತಹೀನತೆ ತಡೆಗೆ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್ ರತ್ನಾಕರ ಹೇಳಿದರು.

ನಗರದ ಮೈಲೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪೋಷಣ ಮಾಸಾಚರಣೆ ಮತ್ತು ಪ್ರಧಾನಮಂತ್ರಿ ಮಾತೃವಂದನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ನಿತ್ಯ ಹಸಿ ಸೊಪ್ಪು, ಮೊಳಕೆ ಬರಿಸಿದ ಕಾಳು, ತರಕಾರಿ, ಮೊಟ್ಟೆ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ಆರೋಗ್ಯ ವೃದ್ಧಿ ಸಾಧ್ಯವಿದೆ ಎಂದು ತಿಳಿಸಿದರು.

ADVERTISEMENT

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಅಧ್ಯಕ್ಷೆ ಲಕ್ಷ್ಮಿ ದಂಡೆ ಮಾತನಾಡಿದರು.

ಮಾತೃ ವಂದನ, ಪೋಷಣ ಅಭಿಯಾನದ ಸಿಬ್ಬಂದಿ, ಅಂಗನವಾಡಿ ಮೇಲ್ವಿಚಾರಕರು, ಮಹಿಳಾ ಶಕ್ತಿ ಕೇಂದ್ರಗಳ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಫಲಾನುಭವಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.