ADVERTISEMENT

ಬೀದರ್‌ | ದ್ವೇಷ ಬೇಡ, ಸಾಮರ್ಥ್ಯ ಒರೆಗೆ ಹಚ್ಚಿ: ಉಪನಿರ್ದೇಶಕ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 6:23 IST
Last Updated 20 ಸೆಪ್ಟೆಂಬರ್ 2025, 6:23 IST
<div class="paragraphs"><p>ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು </p></div>

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು

   

ಬೀದರ್: ‘ಕ್ರೀಡೆಯಲ್ಲಿ ನಮ್ಮ ಸಾಮರ್ಥ್ಯ, ಪ್ರತಿಭೆ ಒರೆಗೆ ಹಚ್ಚಬೇಕು. ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಹೊರತು ದ್ವೇಷಕ್ಕೆ ಅವಕಾಶ ಕೊಡಬಾರದು’ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ವತಿಯಿಂದ ನಗರದ ಎನ್ಎಫ್ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಸಿದ್ಧಾರ್ಥ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಪ್ರಭು ಎಸ್.ಧ್ವಜಾರೋಹಣ ಮಾಡಿದರು.

ಚಂದ್ರಕಾಂತ ಗಂಗಶೆಟ್ಟಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಚಂದ್ರಪ್ಪ ಭತಮುರ್ಗೆ, ವಿಜಯಕುಮಾರ ಪಾಟೀಲ ಹೆಡಗಾಪುರ, ಬಾಲಾಜಿ ವಾಡೇಕರ್, ಶಿವರಾಜ ಬಿರಾದಾರ, ಎಲಿಜಬೆತ್ ಸ್ವರೂಪರಾಣಿ, ರಾಜಶೇಖರ ಮಂಗಲಗಿ, ಜೈಸೇನಪ್ರಸಾದ್, ರಮೇಶಕುಮಾರ ಪಾಟೀಲ, ವೀರಣ್ಣ ಕೆ., ಚಂದ್ರಕಲಾ ಕೆ., ಸಂಜಯ್ ಜೆಸ್ಸಿ, ಧನರಾಜ ಖೇಣಿ, ಶಿವಪುತ್ರ ಶಿನ್ನೂರ ಹಾಗೂ ನಾಗನಾಥ ಬಿರಾದಾರ ಇದ್ದರು.

ಉಪನ್ಯಾಸಕ ಎಸ್.ಎಂ.ಐನಾಪುರ ನಿರೂಪಿಸಿದರು. ಬಸವರಾಜ ಹೆಗ್ಗೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.