ADVERTISEMENT

ಹುಮನಾಬಾದ್: ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2019, 12:30 IST
Last Updated 22 ನವೆಂಬರ್ 2019, 12:30 IST
ಹುಮನಾಬಾದ್‍ನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪಠ್ಯೇತರ ಚಟುವಟಿಕೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ
ಹುಮನಾಬಾದ್‍ನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪಠ್ಯೇತರ ಚಟುವಟಿಕೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ   

ಹುಮನಾಬಾದ್: ಜಿಲ್ಲಾ ಮಟ್ಟದ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಭಾವಗೀತೆ ಸ್ಪರ್ಧೆಯಲ್ಲಿ ಕಲಾ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಂಜಲಿ ಮಾರುತಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಾನಪದ ಗೀತೆ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುರ್ಯಕಾಂತ ಮಾರುತಿ ಪ್ರಥಮ ಸ್ಥಾನ ಪಡೆದಿದ್ದಾರೆ.

ADVERTISEMENT

ಭಕ್ತಿಗೀತೆ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯಶೋಧಾ ಧುಳಪ್ಪ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಿತ್ರಕಲಾ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಗರಾಜ ಈರಣ್ಣ ದ್ವಿತೀಯ ಸ್ಥಾನ ಪಡೆದರೆ, ಚರ್ಚಾಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ ನೀಲಕಂಠ ಮಾರುತಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಜೇಂದ್ರ ಸ್ವಾಮಿ, ಉಪನ್ಯಾಸಕರಾದ ಡಾ.ತುಳಜಾರಾಮ ಗಯಾದನಕರ್, ವಿದ್ಯಾವತಿ ಚಿದ್ರಿ, ಸಮಿನಾ ಅಂಜುಂ, ತಿಪ್ಪಣ್ಣ ಕೆಂಪೇನೋರ್ ಹಾಗೂ ಗೀತಾ ಸಜ್ಜನ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.