
ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ 2026-27ನೇ ಸಾಲಿನ ಮೊದಲ ಹಂತದ ಗುರುಕುಲ ಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆದವು.
2026ರ ಜನವರಿ ಅಂತ್ಯದ ವರೆಗೂ ಐದು ಹಂತದಲ್ಲಿ ಪರೀಕ್ಷೆ ನಡೆಯಲಿದ್ದು, ಮೊದಲ ಹಂತದ ಪರೀಕ್ಷೆಗೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿ ನೆರೆಯ ಮಹಾರಾಷ್ಟ್ರ, ತೆಲಂಗಾಣ ರಾಜ್ಯದ ನಾನಾ ಕಡೆಗಳಿಂದ 1,900 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು.
ಅದರಲ್ಲಿ ವಿವಿಧೆಡೆ ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 1,207 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಮೊದಲ 25 ರ್‍ಯಾಂಕ್ ಪಡೆಯುವ ವಿದ್ಯಾರ್ಥಿಗಳು ಉಚಿತ ಶಿಕ್ಷಣ, ವಸತಿ ಮತ್ತು ಕೋಚಿಂಗ್ ಸೌಲಭ್ಯ ಪಡೆಯಲಿದ್ದಾರೆ.
75 ವಿದ್ಯಾರ್ಥಿಗಳು ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ, ವಸತಿ, ಕೋಚಿಂಗ್ ಸೌಲಭ್ಯ ಪಡೆದುಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.