ಪ್ರಜಾವಾಣಿ ವಾರ್ತೆ
ಬೀದರ್: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ನಗರದ ಬಸವೇಶ್ವರ ಶಿಕ್ಷಣ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ’ನೆನಪಿನಂಗಳ’ದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
2022-23ನೇ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕ ಹೊಂದಿದ 52 ಜನರನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಸನ್ಮಾನಿಸಿದರು.
ಶಿಕ್ಷಣ ರಂಗದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠವಾದುದು. ಸಮಾಜ ಬದಲಾವಣೆ ಹಾಗೂ ನಿರ್ಮಾಣದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಭಾಲ್ಕಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ, ಪ್ರಾಂಶುಪಾಲ ಮಲ್ಲಿಕಾರ್ಜುನ ಚ. ಕನಕಟ್ಟೆ, ಶಂಭುಲಿಂಗ ವಾಲದೊಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಇನಾಯತ ಸಿಂಧೆ, ಶರಣಪ್ಪ ಮೂಲಗೆ, ಬಿ.ವಿ. ಭೂಮರಡ್ಡಿ ಕಾಲೇಜಿನ ಪ್ರಾಂಶುಪಾಲ ಪಿ.ವಿಠ್ಠಲರೆಡ್ಡಿ, ಉಪನ್ಯಾಸಕಿ ವೀಣಾ ಜಲಾದಿ ಹಾಜರಿದ್ದರು.
ಪಾಂಡುರಂಗ ಕುಂಬಾರ ಸ್ವಾಗತಿಸಿದರೆ, ಸಂತೋಷಕುಮಾರ ಸಜ್ಜನ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.