ADVERTISEMENT

‘ಜಾತಿ ಗಣತಿಯಲ್ಲಿ ಕೊರಮ, ಕೊರವ, ಕೊರಚ ನಮೂದಿಸಿ’

​ಪ್ರಜಾವಾಣಿ ವಾರ್ತೆ
Published 4 ಮೇ 2025, 15:49 IST
Last Updated 4 ಮೇ 2025, 15:49 IST

ಬೀದರ್‌: ‘ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣಕ್ಕೆ ಜಾತಿ ಗಣತಿಗೆ ಮುಂದಾಗಿದ್ದು, ಕೊರಮ–ಕೊರವರು ಸಮೀಕ್ಷೆಯಲ್ಲಿ ಭಾಗವಹಿಸಿ, ವಿವರ ತಪ್ಪದೇ ನಮೂದಿಸಬೇಕು’ ಎಂದು ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಬೀದರ್‌ ಜಿಲ್ಲಾ ಘಟಕ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಕೊರಮ-ಕೊರಚ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿ ಮನವಿ ಮಾಡಿದೆ.

ಪರಿಶಿಷ್ಟ ಜಾತಿಯ 101 ಜಾತಿಗಳ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಕೊರಮ, ಕೊರವ ಜಾತಿಯ ಜನಸಂಖ್ಯೆ 35 ಸಾವಿರಕ್ಕೂ ಹೆಚ್ಚಿದೆ. ಅನೇಕರಿಗೆ ಸ್ವಂತ ಸೂರಿಲ್ಲ. ಯಾವುದೇ ದಾಖಲೆ ಪತ್ರಗಳಿಲ್ಲ. ಇಂತಹ ಅಲೆಮಾರಿಗಳ ಗಣತಿಗೆ ಜಿಲ್ಲಾಡಳಿತ ವಿಶೇಷ ಗಮನ ಹರಿಸಬೇಕು ಎಂದು ಸಮಿತಿ ಜಿಲ್ಲಾ ಘಟಕದ ಕಾರ್ಯದರ್ಶಿ ಸೂರ‍್ಯಕಾಂತ ಕಮಠಾಣ ಆಗ್ರಹಿಸಿದ್ದಾರೆ.

ಅಲೆಮಾರಿ ಸಮುದಾಯದವರ ಗಣತಿಗೆಅಲೆಮಾರಿ ಸಂಘಟನೆ/ ಸ್ವಯಂ ಸೇವಾ ಸಂಸ್ಥೆಗಳ ಸಮನ್ವಯದೊಂದಿಗೆ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಬೇಕು. ಗಣತಿಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ವಾಸ್ತವಿಕವಾಗಿ ನಮೂದಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.