ಔರಾದ್: ತಾಲ್ಲೂಕಿನ ಚಟ್ನಾಳ ಗ್ರಾಮದ ವೃದ್ಧೆ ವಚಲಾಬಾಯಿ ರಾಮಣ್ಣ ಉಪ್ಪಾರ (65) ಕೌಠಾ ಸಮೀಪದ ಮಾಂಜ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಮನೆಯಿಂದ ಹೋಗಿ ಸಂಜೆ ವೇಳೆ ನದಿಗೆ ಹಾರಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳೀಯರ ಸಹಾಯದಿಂದ ವಚಲಾಬಾಯಿ ಅವರ ಶವ ಹೊರ ತೆಗೆದಿದ್ದಾರೆ. ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ವಚಲಾಬಾಯಿ ಅವರು ಯಾರೂ ನೋಡುವವರಿಲ್ಲದೆ ಮಾನಸಿಕವಾಗಿ ನೊಂದಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.