ADVERTISEMENT

ಬೆಳಿಗ್ಗೆ ದಟ್ಟಣೆ: ಮಧ್ಯಾಹ್ನ ನಿಶಬ್ಧ

​ಪ್ರಜಾವಾಣಿ ವಾರ್ತೆ
Published 24 ಮೇ 2020, 16:57 IST
Last Updated 24 ಮೇ 2020, 16:57 IST
ಚಿಟಗುಪ್ಪ ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿದ್ದವು
ಚಿಟಗುಪ್ಪ ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿದ್ದವು   

ಚಿಟಗುಪ್ಪ: ಕೊರಾನಾ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್ ಘೊಷಣೆ ಮಾಡಿದ್ದರ ಪರಿಣಾಮ ಪಟ್ಟಣದಲ್ಲಿ ಬೆಳಿಗ್ಗೆ ಜನದಟ್ಟಣೆ, ಮಧ್ಯಾಹ್ನ ರಸ್ತೆಗಳು ಬಿಕೋ ಎನ್ನುತ್ತಿದ್ದವು.

ಭಾನುವಾರ ಬೆಳಿಗ್ಗೆ 9 ಗಂಟೆಯವರೆಗೂ ಎಲ್ಲ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಜನದಟ್ಟಣೆ ಕಂಡುಬಂತು.

ತಕ್ಷಣ ಅಧಿಕಾರಿಗಳು ಎಚ್ಚೆತ್ತು, ಎಲ್ಲ ಅಂಗಡಿಗಳು ಮುಚ್ಚಿಸಿದರು. ಕೆಲವು ಅಂಗಡಿಗಳಿಂದ ದಂಡ ವಸೂಲಿ ಮಾಡಲಾಯಿತು. ಪೊಲೀಸರು ಎಲ್ಲೆಡೆ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.