
ಪ್ರಜಾವಾಣಿ ವಾರ್ತೆ
ಬೀದರ್: ನಗರದ ಬಹಮನಿ ಕೋಟೆಯ ಸುತ್ತಮುತ್ತಲಿನ ಪ್ರದೇಶದ ಆಗಸದಲ್ಲಿ ಭಾರತೀಯ ವಾಯುಪಡೆಯಿಂದ ಜ. 16ರಂದು ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ ಹಮ್ಮಿಕೊಂಡಿದ್ದು, ಗಾಳಿಪಟ ಹಾರಿಸುವುದನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಆದೇಶ ಹೊರಡಿಸಿದ್ದಾರೆ.
ಬೀದರ್ ಕೋಟೆ ಸುತ್ತಮುತ್ತಲಿನ ಮೂರು ಮೈಲಿ ಪ್ರದೇಶದ ವ್ಯಾಪ್ತಿಯಲ್ಲಿ ಜ. 15ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರ ವರೆಗೆ, ಜ. 16ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರ ವರೆಗೆ ಮತ್ತು ಮಧ್ಯಾಹ್ನ 3.45ರಿಂದ ಸಂಜೆ 5ರ ವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಬುಧವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.