ಭಗವಂತ ಖೂಬಾ
ಬೀದರ್: ‘ವಿಧಾನಸಭೆಯಿಂದ ಶಾಸಕರನ್ನು ಆರು ತಿಂಗಳ ಅವಧಿಗೆ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಪ್ರತಿಕ್ರಿಯಿಸಿದ್ದಾರೆ.
ಶಾಸಕರಾದವರು ಜನರ ಭಾವನೆಗಳನ್ನು ವಿಧಾನಸೌಧದಲ್ಲಿ ವ್ಯಕ್ತಪಡಿಸಿ, ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಾರೆ. ಆದರೆ, ಅವರನ್ನು ಗಣನೆಗೆ ತೆಗೆದುಕೊಳ್ಳದೆ, ಅವರ ಭಾವನೆಗಳಿಗೆ ಬೆಲೆ ಕೊಡದೆ ರಾಜ್ಯ ಸರ್ಕಾರ ಮನಸ್ಸಿಗೆ ತೋಚಿದಂತೆ ನಡೆದುಕೊಂಡಿರುವುದು ಸರಿಯಲ್ಲ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದು ತರಹ ಅರಾಜಕತೆ ಸೃಷ್ಟಿಯಾದಂತೆ ಜನರಿಗೆ ಭಾಸವಾಗುತ್ತಿದೆ. ಶಾಸಕರು ‘ಮಧುಬಲೆ’ಯಂತಹ ಮುಖ್ಯವಾದ ವಿಷಯದ ಕುರಿತು ಮಾತನಾಡುತ್ತಿದ್ದರು. ಅದಕ್ಕೆ ಸ್ಪಂದಿಸಿ ತನಿಖೆ ನಡೆಸಬೇಕಿತ್ತು. ಆದರೆ, ಅವರನ್ನು ಅಮಾನತುಗೊಳಿಸಿರುವುದು ಖಂಡನಾರ್ಹ ಎಂದಿದ್ದಾರೆ.
ಕಮಲನಗರದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ರೈತರ ಜಮೀನು ಪಡೆಯಲಾಗಿದೆ. ಪಹಣಿಯಲ್ಲೂ ಪ್ರಜಾಸೌಧ ಎಂದು ನಮೂದಾಗಿದೆ. ಕೂಡಲೇ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.