ADVERTISEMENT

‘ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಿ’

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 14:30 IST
Last Updated 14 ಡಿಸೆಂಬರ್ 2019, 14:30 IST
ಹುಮನಾಬಾದ್‍ ಪಟ್ಟಣದ ಬಡಾವಣೆಯ ರಸ್ತೆ ಪಕ್ಕದಲ್ಲಿ ಕಸ ಹಾಕುತ್ತಿರುವ ಜಾಗವನ್ನು ಶನಿವಾರ ಪುರಸಭೆಯಿಂದ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಲಾಯಿತು
ಹುಮನಾಬಾದ್‍ ಪಟ್ಟಣದ ಬಡಾವಣೆಯ ರಸ್ತೆ ಪಕ್ಕದಲ್ಲಿ ಕಸ ಹಾಕುತ್ತಿರುವ ಜಾಗವನ್ನು ಶನಿವಾರ ಪುರಸಭೆಯಿಂದ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಲಾಯಿತು   

ಹುಮನಾಬಾದ್: ‘ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಹೇಳಿದರು.

ಪಟ್ಟಣದ ವಿವಿಧ ಬಡಾವಣೆಗಳ ರಸ್ತೆ ಬದಿಯಲ್ಲಿ ಕಸ ಹಾಕುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಶನಿವಾರ ಕಸ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸುವ ವಿನೂನತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಟ್ಟಣದಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲು ಸರ್ಕಾರ ಹಲವು ಕ್ರಮಗಳನ್ನು ಜಾರಿಗೆ ತಂದಿದೆ. ಪುರಸಭೆ ಮತ್ತು ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ಪಟ್ಟಣದ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ADVERTISEMENT

ಪಟ್ಟಣದ ನಿವಾಸಿಗಳಾದ ಸಂಜುಕುಮಾರ ಸಜ್ಜನ್, ಗೋವಿಂದಸಿಂಗ್ ತಿವಾರಿ, ವಿಲಾಸರಾವ್ ಖಮಿತ್ಕರ್ ಹಾಗೂ ಗುತ್ತಿಗೆದಾರ ರೋಷನಬೇಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.