ಬೇಲೂರು (ಹುಲಸೂರ): ತಾಲ್ಲೂಕಿನ ಬೇಲೂರ ಮಠದ ಉರಿಲಿಂಗ ಪೆದ್ದಿ ಮಠದ ಪೀಠಾಧಿಪತಿ ಪಂಚಾಕ್ಷರಿ ಸ್ವಾಮೀಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕೋವಿಡ್ ಲಸಿಕೆ ಪಡೆದು ಭಕ್ತರಲ್ಲಿ ಜಾಗೃತಿ ಮೂಡಿಸಿದರು.
‘ಲಾಕ್‌ಡೌನ್ ಸಡಿಲಿಕೆಗೊಳಿಸಿದ ಮಾತ್ರಕ್ಕೆ ಜನರು ಅಜಾಗರೂಕತೆಯಿಂದ ಅಲೆದಾಡಬಾರದು’ ಎಂದು ಸಲಹೆ ನೀಡಿದರು.
ತಹಶೀಲ್ದಾರ್ ಶಿವಾನಂದ ಮೇತ್ರೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ರಾಮ ಕಾಮಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರವಿ ಗುಂಗೆ, ಡಾ.ಪ್ರತಾಪ ಬಿರಾದಾರ, ಗ್ರಾ.ಪಂ ಮಾಜಿ ಅಧ್ಯಕ್ಷ ನವನಾಥ ಬೆಳ್ಳೆ, ಆರ್‌ಐ ಮೌನೇಶ್ವರ ಸ್ವಾಮಿ, ಪಿಡಿಒ ಮಹಾರುದ್ರಪ್ಪ, ವಿನೋದ ಸಿಂಧೆ, ಸುಶೀಲಕುಮಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.