ADVERTISEMENT

ಕತ್ತಿ ವರಸೆ ಕ್ರೀಡಾಕೂಟ: ಗುರುನಾನಕ ಶಾಲೆ ಸಾಧನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 12:24 IST
Last Updated 27 ನವೆಂಬರ್ 2021, 12:24 IST
ಬೀದರ್‌ನ ಗುರುನಾನಕ ಶಾಲೆಯಲ್ಲಿ ಶುಕ್ರವಾರ ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಚಿನ್ನದ ಪದಕದ ಸಾಧನೆಗೈದ ವಿದ್ಯಾರ್ಥಿನಿಯರಾದ ಯೋಗೇಶ್ವರಿ ಹಾಗೂ ಸಂಸ್ಕøತಿ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಗುರುನಾನಕ ಶಾಲೆಯಲ್ಲಿ ಶುಕ್ರವಾರ ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಚಿನ್ನದ ಪದಕದ ಸಾಧನೆಗೈದ ವಿದ್ಯಾರ್ಥಿನಿಯರಾದ ಯೋಗೇಶ್ವರಿ ಹಾಗೂ ಸಂಸ್ಕøತಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಇಲ್ಲಿಯ ನೆಹರೂ ಕ್ರೀಡಾಂಗಣ ಸಮೀಪದ ಗುರುನಾನಕ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಚಿನ್ನದ ಪದಕದ ಸಾಧನೆಗೈದಿದ್ದಾರೆ.

ನಾಲ್ಕನೇ ತರಗತಿಯ ಸಂಸ್ಕೃತಿ ಶ್ರೀಕಾಂತ ಮೋದಿ ಹಾಗೂ ಏಳನೇ ತರಗತಿಯ ಯೋಗೇಶ್ವರಿ ರಾಜಶೇಖರ ಚಿನ್ನದ ಪದಕ ಜಯಿಸಿದ್ದಾರೆ.

ಸಾಧಕ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಾಚಾರ್ಯ ಎನ್. ರಾಜು ಸನ್ಮಾನಿಸಿದರು.

ADVERTISEMENT

ಪ್ರತಿ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.

ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.