ADVERTISEMENT

ಸಾಂಕೇತಿಕ ವಿಜಯ ದಶಮಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 15:22 IST
Last Updated 12 ಅಕ್ಟೋಬರ್ 2021, 15:22 IST

ಬೀದರ್‌: ನಗರದ ಹನುಮಾನ ದೇವಸ್ಥಾನದಲ್ಲಿ ಶ್ರೀ ರಾಮಲೀಲಾ ಉತ್ಸವ ಸಮಿತಿ ಸಭೆ ನಡೆಯಿತು.

ಕೋವಿಡ್‌ ಕಾರಣ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕಿದೆ. ಕೋವಿಡ್‌ ನಿಯಂತ್ರಿಸಲು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕಾಗಿದೆ. ಹೀಗಾಗಿ ವಿಜಯ ದಶಮಿಯನ್ನು ಅತ್ಯಂತ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಗೌರವ ಅಧ್ಯಕ್ಷ ರಾಜಕುಮಾರ ಅಗರವಾಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಲಾಯಿತು.

ಮೈಸೂರು ಹಾಗೂ ಮಹಾರಾಷ್ಟ್ರದ ತುಳಜಾಪುರದಲ್ಲಿ ಶುಕ್ರವಾರ ವಿಜಯ ದಶಮಿ ಆಚರಿಸಲಾಗುತ್ತಿದೆ. ಅದರಂತೆ ಬೀದರ್‌ನಲ್ಲಿ ಸಾಂಕೇತಿಕ ಆಚರಣೆ ನಡೆಯಲಿದೆ. ಸಮಿತಿ ಪದಾಧಿಕಾರಿಗಳು ಮಾತ್ರ ಪಾಲ್ಗೊಂಡು ಪೂಜೆ ಸಲ್ಲಿಸಲಿದ್ದಾರೆ. ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಸಭೆಯಲ್ಲಿ ಹೇಳಲಾಯಿತು.

ADVERTISEMENT

ಸಮಿತಿ ಅಧ್ಯಕ್ಷ ಚಂದ್ರಶೇಖರ ಗಾದಾ, ಸಮಿತಿ ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಚಂದ್ರಶೇಖರ ಗಾದಾ, ಮಹೇಶ್ವರ ಸ್ವಾಮಿ, ವಿನೋದ ಪಾಟೀಲ, ಯೋಗೇಶ ಪಾಠಕ್, ನಿಲೇಶ ರಕ್ಷಾಳ್, ರಾಜಕುಮಾರ ಜಮಾದಾರ, ಸುನೀಲ್ ಕಟಗಿ, ಅನಿಲ ರಾಜಗಿರಾ, ರಾಜೇಂದ್ರ ಪೂಜಾರಿ, ಉಮೇಶ ಕೊಮಟಕರ್, ದತ್ತು ಯರನಳ್ಳಿ, ಆನಂದ ಕೋಮಟಕರ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.