ADVERTISEMENT

ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 13:13 IST
Last Updated 8 ಸೆಪ್ಟೆಂಬರ್ 2021, 13:13 IST
ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು
ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು   

ಜನವಾಡ: ಶೈಕ್ಷಣಿಕ ಅನುಕೂಲಕ್ಕಾಗಿ ಅಗಸ್ತ್ಯ ಫೌಂಡೇಷನ್ ಹಾಗೂ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದ ವತಿಯಿಂದ ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಅವರು, ವಿದ್ಯಾರ್ಥಿಗಳು ಟ್ಯಾಬ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದ ಮುಖ್ಯಸ್ಥ ಬಾಬುರಾವ್ ಎನ್.ಎಸ್ ಮಾತನಾಡಿದರು. ಡಯಟ್ ಉಪನ್ಯಾಸಕ ಝಾಕೀರ್ ಹುಸೇನ್, ಮುಖ್ಯ ಶಿಕ್ಷಕ ಭೀಮಣ್ಣ ಹಡಪದ, ವೀರಾಜ್ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕ ಸುಧಾಕರ ನಿರೂಪಿಸಿದರು. ಶಿಕ್ಷಕ ಕಿಶೋರ ವಂದಿಸಿದರು.

ADVERTISEMENT

ಇದೇ ವೇಳೆ ಶಾಲೆಯಲ್ಲಿ ಗಣಕಯಂತ್ರ ಕೋಣೆ ಉದ್ಘಾಟನೆಯೂ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.