ADVERTISEMENT

ಸರ್ಕಾರದ ಯೋಜನೆ ಪ್ರಯೋಜನ ಪಡೆಯಿರಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 12:44 IST
Last Updated 6 ಅಕ್ಟೋಬರ್ 2021, 12:44 IST
ಬೀದರ್‌ನ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ಸಫಾಯಿ ಕರ್ಮಚಾರಿಗಳು, ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಸೌಲಭ್ಯ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಉದ್ಘಾಟಿಸಿದರು. ಡಿವೈಎಸ್‌ಪಿ ಸತೀಶ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲ ಮೇಲ್ದೊಡ್ಡಿ, ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಜಿ.ಟಿ ಸರೋಜಾ, ಸಫಾಯಿ ಕರ್ಮಚಾರಿ ಇಲಾಖೆಯ ಕಾರ್ಯದರ್ಶಿ ಅಮಿರ್ ಪಾಷಾ ಇದ್ದಾರೆ

ಬೀದರ್: ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಹೇಳಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ಸಫಾಯಿ ಕರ್ಮಚಾರಿಗಳು, ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸೌಲಭ್ಯ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಅರ್ಹ ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ADVERTISEMENT

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್‍ಟಾಪ್ ವಿತರಿಸಲಾಗುತ್ತಿದೆ. ಅಕ್ಟೋಬರ್ 25 ಕೊನೆ ದಿನವಾಗಿದೆ. ಅರ್ಹರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಮಟ್ಟದ ಸಫಾಯಿ ಕರ್ಮಚಾರಿ ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯ ವಿನೋದ ರತ್ನಾಕರ್ ಹೇಳಿದರು.

ಸೆಫ್ಟಿ ಟ್ಯಾಂಕ್ ಸ್ವಚ್ಛತೆಗಾಗಿ ಪ್ರಸ್ತುತ ಅನೇಕ ಅತ್ಯಾಧುನಿಕ ಯಂತ್ರಗಳು ಬಂದಿವೆ ಎಂದು ಬೀದರ್ ಡಿವೈಎಸ್‍ಪಿ ಕೆ.ಎಂ. ಸತೀಶ್ ತಿಳಿಸಿದರು.

ರಾಜ್ಯ ಸರ್ಕಾರವು ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಅಭಿವೃದ್ಧಿಗೆ ಜಾರಿಗೊಳಿಸಿರುವ ಯೋಜನೆಗಳ ಕುರಿತು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ಎಂ. ಬಡಿಗೇರ ಸಚಿತ್ರ ಮಾಹಿತಿ ನೀಡಿದರು.

ಜಿಲ್ಲಾ ಸಫಾಯಿ ಕರ್ಮಚಾರಿ ಸಂಘದ ಅಧ್ಯಕ್ಷ ಮುಕೇಶ, ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಟಿ. ಸರೋಜಾ, ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಇದ್ದರು. ದೇವಿದಾಸ ಜೋಶಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.