ADVERTISEMENT

ಸರ್ಕಾರದ ಯೋಜನೆಗಳ ಲಾಭ ಪಡೆಯಿರಿ

​ಪ್ರಜಾವಾಣಿ ವಾರ್ತೆ
Published 21 ಮೇ 2022, 14:55 IST
Last Updated 21 ಮೇ 2022, 14:55 IST
ಬೀದರ್‌ ಸಮೀಪದ ಚಿಕ್ಕಪೇಟದ ಡಾನ್ ಬೋಸ್ಕೊ ಸಮಾಜಸೇವಾ ಸಂಸ್ಥೆಯಲ್ಲಿ ಆಯೋಜಿಸಿದ್ದ ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ನಿರ್ದೇಶಕ ಜೇಮ್ಸ್ ಪೌಲ್ ಮಾತನಾಡಿದರು
ಬೀದರ್‌ ಸಮೀಪದ ಚಿಕ್ಕಪೇಟದ ಡಾನ್ ಬೋಸ್ಕೊ ಸಮಾಜಸೇವಾ ಸಂಸ್ಥೆಯಲ್ಲಿ ಆಯೋಜಿಸಿದ್ದ ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ನಿರ್ದೇಶಕ ಜೇಮ್ಸ್ ಪೌಲ್ ಮಾತನಾಡಿದರು   

ಬೀದರ್‌: ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಸರ್ಕಾರದ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗಲು ಪ್ರಯತ್ನಿಸಬೇಕು ಎಂದು ಡಾನ್ ಬೋಸ್ಕೊ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕ ಜೇಮ್ಸ್‌ ಪೌಲ್‌ ಸಲಹೆ ನೀಡಿದರು.

ಚಿಕ್ಕಪೇಟೆಯ ಡಾನ್ ಬೋಸ್ಕೊ ಸಮಾಜ ಸೇವಾ ಸಂಸ್ಥೆಯಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ನಾಯಕತ್ವ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಡಿಸಿಸಿ ಬ್ಯಾಂಕ್ ಅಧಿಕಾರಿ ಉಮಾದೇವಿ ಮಾತನಾಡಿ, ಸ್ವಸಹಾಯ ಸಂಘಗಳ ಮಹಿಳೆಯರಿಗೆ ಡಿಸಿಸಿ ಬ್ಯಾಂಕ್‍ ಕೇವಲ 20ಪೈಸೆ ಬಡ್ಡಿ ದರದಲ್ಲಿ ₹ 5ರಿಂದ ₹ 10 ಲಕ್ಷವರೆಗೆ ಸಾಲ ಸೌಲಭ್ಯ ಒದಗಿಸುತ್ತಿದೆ. ಇದರ ಲಾಭ ಪಡೆಯಬೇಕು ಎಂದರು.

ADVERTISEMENT

ಡಿಸಿಸಿ ಬ್ಯಾಂಕ್‌ ಅಧಿಕಾರಿ ಅರ್ಚನಾ, ಡಾ.ಜೈಶಾಲಿನಿ, ಆರ್ಬಿಟ್‌ ಸಂಸ್ಥೆಯ ನಿರ್ಮಲಾ ಇದ್ದರು. ಸವಿತಾ ಸೂರ್ಯವಂಶಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಂದಿನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.