ADVERTISEMENT

ಜನವಾಡ: 'ಹೈನುಗಾರಿಕೆ ಅವಕಾಶ ಬಳಸಿಕೊಳ್ಳಿ'

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 16:04 IST
Last Updated 11 ಜನವರಿ 2021, 16:04 IST
ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಆರಂಭವಾದ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಉದ್ಘಾಟಿಸಿದರು
ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಆರಂಭವಾದ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಉದ್ಘಾಟಿಸಿದರು   

ಜನವಾಡ: ರೈತರು ಜಿಲ್ಲೆಯಲ್ಲಿ ಹೈನುಗಾರಿಕೆಗೆ ಇರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದುಕಲಬುರ್ಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ವ್ಯವಸ್ಥಾಪಕ ಶಾಲಿವಾನ್ ವಾಡೆ ಸಲಹೆ ಮಾಡಿದರು.

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಆರಂಭವಾದ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಉಪಕಸುಬು ಆಗಿ ಹೈನುಗಾರಿಕೆ ಕೈಗೊಳ್ಳುವ ಮೂಲಕ ರೈತರು ಆರ್ಥಿಕ ಸ್ಥಿತಿ ಬಲಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ADVERTISEMENT

ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ದಿಲೀಪಕುಮಾರ ಕಾರ್ಯಕ್ರಮ ಉದ್ಘಾಟಿಸಿ, ರೈತರು ವೈಜ್ಞಾನಿಕ ಹೈನುಗಾರಿಕೆ ಪದ್ಧತಿ ಅನುಸರಿಸಬೇಕು ಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನಿಗಳಾದ ಡಾ. ಅಕ್ಷಯಕುಮಾರ, ಡಾ.ಆರ್.ಎಲ್. ಜಾಧವ್, ಡಾ. ರಾಜೇಶ್ವರಿ, ಡಾ. ನಿಂಗದಳ್ಳಿ ಮಲ್ಲಿಕಾರ್ಜುನ, ಡಾ. ದೀಪಕ ಪಾಟೀಲ, ಡಾ. ಕಿರಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.