ADVERTISEMENT

ಭಾಲ್ಕಿ: ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ

​ಪ್ರಜಾವಾಣಿ ವಾರ್ತೆ
Published 25 ಮೇ 2025, 14:02 IST
Last Updated 25 ಮೇ 2025, 14:02 IST
ಭಾಲ್ಕಿಯ ಪುರಭವನದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಸಂಸದ ಸಾಗರ ಖಂಡ್ರೆ ಚಾಲನೆ ನೀಡಿದರು
ಭಾಲ್ಕಿಯ ಪುರಭವನದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಸಂಸದ ಸಾಗರ ಖಂಡ್ರೆ ಚಾಲನೆ ನೀಡಿದರು   

ಭಾಲ್ಕಿ: ತಾಲ್ಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರ್ಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ಕೃಷಿ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ ಆಗುತ್ತಿದೆ. ಹಾಗಾಗಿ ರೈತರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಈ ಬಾರಿಯ ಮುಂಗಾರು ಹಂಗಾಮು ಆಶಾಯದಾಯಕದ ನಿರೀಕ್ಷೆಯಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ಪೂರೈಕೆಗೆ ಸರ್ಕಾರಿ ಕ್ರಮ ಕೈಗೊಂಡಿದೆ. ಹಾಗಾಗಿ ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರದ ಬಗ್ಗೆ ಆತಂಕ ಪಡಬೇಕಿಲ್ಲ. ತಾಲ್ಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜದ ಲಭ್ಯತೆ ಇರಲಿದೆ. ಕೃಷಿ ಅಧಿಕಾರಿಗಳು ರೈತರಿಗೆ ಯಾವುದೇ ಕಾರಣಕ್ಕೂ ಬಿತ್ತನೆ ಬೀಜದ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಬಸವಕಲ್ಯಾಣ ಕೃಷಿ ಇಲಾಖೆ ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ, ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ರಮೇಶ ಪಾಟೀಲ, ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ ಸಿಂಧನಕೇರೆ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಕೆವಿಕೆ ಮುಖ್ಯಸ್ಥ ಆರ್.ಎಲ್.ಜಾಧವ್ ಸೇರಿದಂತೆ ಹಲವರು ಇದ್ದರು.

ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ಆಕಾಶ ಹಿಲಾಲಪೂರೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.