ಕಮಲನಗರ: ತಾಲ್ಲೂಕಿನ ಮುರ್ಕಿವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಅನುಮತಿ ಪಡೆಯದೇ ಗೈರಾಗಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಅವರ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಎಸ್‍ಡಿಎಂಸಿ ಅಧ್ಯಕ್ಷ ಮನೀಶ ಆಡೆ ಅವರು ಒತ್ತಾಯಿಸಿದ್ದಾರೆ.ಶಾಲೆಗೆ ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾರೆ. ಶೀಘ್ರವೇ ಸಂಬಂಧಪಟ್ಟ ಶಿಕ್ಷಕರ ಮೇಲೆ ಕ್ರಮ ಜರುಗಿಸಬೇಕು ಎಂದು ಎಸ್‍ಡಿಎಂಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.