ADVERTISEMENT

ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯ ವರ್ತನೆ: ಶಿಕ್ಷಕನ ಬಂಧನ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 6:08 IST
Last Updated 16 ಫೆಬ್ರುವರಿ 2026, 6:08 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬಸವಕಲ್ಯಾಣ: ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ನಗರದ ಶಿಕ್ಷಕ ಮಲ್ಲಿಕಾರ್ಜುನ ಎನ್ನುವವರನ್ನು ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಸಮೀಪದ ಗ್ರಾಮವೊಂದರ ಬಾಲಕಿಗೆ ಚಾಕೋಲೆಟ್ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕೂಡಿಸಿಕೊಂಡು ದೂರಕ್ಕೆ ಹೋಗಿ ಶಿಕ್ಷಕನು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಮಕ್ಕಳ ರಕ್ಷಣಾ ಘಟಕದ ದೂರಿನ ಮೇರೆಗೆ ಅಪಹರಣ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಶಿಕ್ಷಕನ ಬಂಧನವಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.