
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ಹುಪಳಾ-ಅಹಮದಾಬಾದ್ ಗ್ರಾಮ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಶಿವಾನಂದ ತುಳಸಿರಾಮ ಮೇತ್ರೆ (38) ಸೋಮವಾರ ರಾತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಶಿವಾನಂದ ಅವರು ತಮ್ಮ ಹೊಲದಿಂದ ಬೀದರ್ ಉದಗೀರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಮಾರ್ಗವಾಗಿ ದ್ವಿಚಕ್ರ ವಾಹನದ ಮೇಲೆ ತಮ್ಮ ಗ್ರಾಮ ಹುಪಳಾ ಕಡೆಗೆ ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವು ಸಂಭವಿಸಿದೆ.
ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ವಿಶ್ವರಾಧ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.