ಔರಾದ್: ತಾಲ್ಲೂಕಿನ ಚಿಂತಾಕಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಕ ಪ್ರಶಾಂತಕುಮಾರ ಅವರನ್ನು ಜಿಲ್ಲೆಯ ಶಾಲಾ ಶಿಕ್ಷಣ ಉಪನಿರ್ದೇಶಕ ಸಲೀಂ ಪಾಶಾ ಅವರು ಅಮಾನತು ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಶಿಕ್ಷಕ ಪ್ರಶಾಂತಕುಮಾರ, ತಮ್ಮ ಪತ್ನಿಗೆ ನೀಡಿದ ಕಿರುಕುಳದಿಂದಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಅವರನ್ನು ನ್ಯಾಯಾಂಗ ಬಂಧನದಲ್ಲಿರುವ ದಿನದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.