ADVERTISEMENT

‘ನಿಷ್ಠೆಯಿಂದ ಅಭ್ಯಾಸ ಮಾಡಿ’

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 10:59 IST
Last Updated 19 ಸೆಪ್ಟೆಂಬರ್ 2022, 10:59 IST
ಹುಮನಾಬಾದ್ ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ್ ಉದ್ಘಾಟಿಸಿದರು
ಹುಮನಾಬಾದ್ ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ್ ಉದ್ಘಾಟಿಸಿದರು   

ಹುಮನಾಬಾದ್: ‘ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದೆ. ನಿಷ್ಠೆಯಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಸಾಧ್ಯವಾಗಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ್ ಹೇಳಿದರು.

ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ,‘ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವದಿಂದ ಕಾಣಬೇಕು’ ಎಂದರು.

ಸಿಪಿಐ ಶರಣ ಬಸಪ್ಪ ಕೊಡ್ಲಾ ಮಾತನಾಡಿ,‘ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ. ಮಕ್ಕಳ ಸಾಮರ್ಥ್ಯಕ್ಕನುಗುಣವಾಗಿ ಶಿಕ್ಷಕರು ಬೋಧಿಸಿದರೆ ಮಕ್ಕಳ ಕಲಿಕಾ ಮಟ್ಟ ಹೆಚ್ಚುತ್ತದೆ’ ಎಂದು ಹೇಳಿದರು.

ADVERTISEMENT

ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಬತಲಿ, ಉಪಾಧ್ಯಕ್ಷ ಗುರುಲಿಂಗ ಭಾವಿ, ನವಿನ್ ಬತಲಿ, ಸಂದೀಪ್ ಬತಲಿ ಹಾಗೂ ಶಾಲೆಯ ಪ್ರಾಂಶುಪಾಲ ಶಾಂತವೀರ ಯಲಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.