ADVERTISEMENT

ಸರ್ಕಾರದ ಯೋಜನೆಗಳ ಯಶಸ್ಸಿಗೆ ಅಧಿಕಾರಿಗಳ ಶ್ರಮ ಅಪಾರ: ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2023, 15:31 IST
Last Updated 19 ಸೆಪ್ಟೆಂಬರ್ 2023, 15:31 IST
ಬೀದರ್ ನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು
ಬೀದರ್ ನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು   

ಬೀದರ್: ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳಿಸುವಲ್ಲಿ ಸರ್ಕಾರಿ ನೌಕರರ ಶ್ರಮ ಅಪಾರಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ಸಚಿವರು, ಶಾಸಕರಿಗೆ ಅಭಿನಂದನೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ತಕ್ಷಣ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, 7ನೇ ವೇತನ ಆಯೋಗದ ಶಿಫಾರಸು ಯಥಾವತ್ತಾಗಿ ಜಾರಿಗೊಳಿಸಬೇಕು. ಹಳೆಯ ಪಿಂಚಣಿ ಯೋಜನೆ ರದ್ದುಪಡಿಸಿ, ಹೊಸ ಪಿಂಚಣಿ ಯೋಜನೆ ಜಾರಿಗೆ ತರಬೇಕು. ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ಸಂಘವು ಜನಪ್ರತಿನಿಧಿಗಳ ಅಭಿನಂದನೆಯೊಂದಿಗೆ ಈ ಬಾರಿ ಶಿಕ್ಷಕರ ದಿನ ಆಚರಿಸಿದೆ. ಪ್ರಾಥಮಿಕ, ಪ್ರೌಢಶಾಲೆ, ಐಟಿಐ, ಪಾಲಿಟೆಕ್ನಿಕ್, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಪ್ರೋತ್ಸಾಹಿಸಲಾಗಿದೆ ಎಂದರು.

ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ಧಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಬಸವರಾಜ, ರಾಜು ಲೆಂಗಟಿ, ಸುರೇಶ ಚನಶೆಟ್ಟಿ, ಬಸವರಾಜ ಜಕ್ಕಾ, ಡಾ.ವೈಶಾಲಿ, ರಾಜಶೇಖರ ಮಂಗಲಗಿ, ಮನೋಹರ ಕಾಶಿ, ಸಿದ್ದಮ್ಮ, ಬಕ್ಕಪ್ಪ ನಿರ್ಣಾಕರ, ಓಂಕಾರ ಮಲ್ಲಿಗೆ, ಪಾಂಡುರಂಗ ಬೆಲ್ದಾರ, ಶಿವರಾಜ ಕಪಲಾಪುರೆ, ಸುಮತಿ ರುದ್ರಾ, ಗಣಪತಿ ಜಮಾದಾರ, ಸುನೀಲ, ಡಾ. ವಾಘಮಾರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.