ADVERTISEMENT

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ: ರೇವಣಸಿದ್ದ ಜಾಡರ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 8:58 IST
Last Updated 6 ಸೆಪ್ಟೆಂಬರ್ 2021, 8:58 IST
ಖಟಕಚಿಂಚೋಳಿ ಗ್ರಾಮದಲ್ಲಿ ಎಬಿವಿಪಿ ವತಿಯಿಂದ ಶಿಕ್ಷಕರ ದಿನ ಆಚರಿಸಲಾಯಿತು
ಖಟಕಚಿಂಚೋಳಿ ಗ್ರಾಮದಲ್ಲಿ ಎಬಿವಿಪಿ ವತಿಯಿಂದ ಶಿಕ್ಷಕರ ದಿನ ಆಚರಿಸಲಾಯಿತು   

ಖಟಕಚಿಂಚೋಳಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾನುವಾರ ಶಿಕ್ಷಕರ ದಿನಾಚರಣೆ ಅಂಗವಾಗಿ ಇಲ್ಲಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು.

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ಮಾತನಾಡಿ,‘ಶಿಕ್ಷಕರಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ
ಸಾಮರ್ಥ್ಯ ಅಡಗಿದೆ. ಆದ್ದರಿಂದ ಶಿಕ್ಷಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರಾಧಾಕೃಷ್ಣನ್ ಅವರು ತಮ್ಮ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಸೂಚಿಸಿದ್ದಾರೆ’ ಎಂದು ತಿಳಿಸಿದರು.

‘ಶಿಕ್ಷಕರು ವಿದ್ಯಾರ್ಥಿಗಳಿಗೆ ನಿರಂತರ ಉತ್ತಮ ಮಾರ್ಗದರ್ಶನ ಮಾಡುವರು. ಸದೃಢ ಭಾರತ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ದೈಹಿಕ ಶಿಕ್ಷಣ ಶಿಕ್ಷಕ ದೇವಿದಾಸ ಮೇತ್ರೆ, ಲೋಕೇಶ ಮೊರೆ, ಅಮಿತ ಜಾಶೆಟ್ಟೆ, ಸೋಮನಾಥ ಪೂಜಾರಿ, ಮೋಹಿಸ್ ಸದ್ದಾಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.