ADVERTISEMENT

ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 13:18 IST
Last Updated 15 ಜನವರಿ 2022, 13:18 IST
ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ ಹಾಗೂ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಉದ್ಘಾಟಿಸಿದರು. ಯೋಗೇಂದ್ರ ಯದಲಾಪೂರೆ, ರಫಿಕ್ ತಾಳಿಕೋಟೆ, ಡಾ.ಎಸ್.ಎಂ. ಚಲ್ವಾ, ಶಿವಯ್ಯ ಸ್ವಾಮಿ, ಅಶ್ವಿನ್, ಓಂಪ್ರಕಾಶ ರೊಟ್ಟೆ ಇದ್ದರು

ಬೀದರ್: ಯುವಕರು ಶ್ರಮ ಸಂಸ್ಕøತಿ ಮೈಗೂಡಿಸಿಕೊಂಡರೆ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಕಾಲೇಜಿನಲ್ಲಿ ನೆಹರೂ ಯುವ ಕೇಂದ್ರ, ಕಲಬುರ್ಗಿ ವಿಭಾಗದ 32ನೇ ಎನ್‍ಸಿಸಿ ಬಟಾಲಿಯನ್, ಅಂತರ ಕಾಲೇಜುಗಳ ಎನ್‍ಸಿಸಿ ಘಟಕಗಳು, ಭಾರತ ಯುತ್ ವೆಲ್‍ಫೇರ್, ಎಜುಕೇಷನ್ ಆ್ಯಂಡ್ ರೂರಲ್ ಡೆವೆಲಪ್‍ಮೆಂಟ್ ಸೊಸೈಟಿ ಹಾಗೂ ಶ್ರೀ ಜಗದ್ಗುರು ಪಂಚಾಚಾರ್ಯ ಯುವ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನ ಹಾಗೂ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವಜನರು ಶಿಸ್ತು, ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತ ಓಂಪ್ರಕಾಶ ರೊಟ್ಟೆ, ಪ್ರಾಚಾರ್ಯ ಡಾ. ಎಂ.ಎಸ್. ಚಲ್ವಾ, ಬೈವರ್ಡ್ ಸೊಸೈಟಿ ಅಧ್ಯಕ್ಷ ಶಿವಕುಮಾರ ಸ್ವಾಮಿ ಮಾತನಾಡಿದರು.

ಯೋಗ ಶಿಕ್ಷಕ ಯೋಗೇಂದ್ರ ಯದಲಾಪೂರೆ ಯೋಗಾಭ್ಯಾಸ ಮಾಡಿಸಿದರು. ಎನ್‍ಸಿಸಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಪಿ. ವಿಠ್ಠಲರೆಡ್ಡಿ ಸ್ವಾಗತಿಸಿದರು. ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿ ಅಶ್ವಿನ್ ನಿರೂಪಿಸಿದರು. ರಫಿಕ್ ತಾಳಿಕೋಟೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.