ADVERTISEMENT

ಕೃಷಿ ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 3:44 IST
Last Updated 11 ಏಪ್ರಿಲ್ 2021, 3:44 IST

ಬೀದರ್‌: ಕೃಷಿ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ 2020-21ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಕೆಯ ಪ್ರಗತಿಯಲ್ಲಿ ರಾಜ್ಯದಲ್ಲೇ ಬೀದರ್ ಜಿಲ್ಲೆ ಮೊದಲ ಸ್ಥಾನದಲ್ಲಿದೆ.

ಡಿಸಿ ಮತ್ತು ಸಿಇಒ ಮೆಚ್ಚುಗೆ:
‘ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ಉಪ ನಿರ್ದೇಶಕ ಸೋಮಶೇಖರ ಬಿರಾದಾರ, ಸೂರ್ಯಕಾಂತ ಬಿರಾದಾರ ಹಾಗೂ ತಾಲ್ಲೂಕುಗಳ ಸಹಾಯಕ ನಿರ್ದೇಶಕರು 2020-21ನೇ ಸಾಲಿನಲ್ಲಿ ಬಿಡುಗಡೆಯಾದ ಮತ್ತು ಸಾಧಿಸಿದ ಪ್ರಗತಿಯ ವಿವರಗಳಲ್ಲಿ ಮೊದಲ ಶ್ರೇಣಿಯಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮತ್ತು ಜಿಪಂ ಸಿಇಒ ಜಹೀರಾ ನಸೀಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೀದರ್ ಜಿಲ್ಲೆ ಶೇ 99.7ರಷ್ಟು ಪ್ರಗತಿ ತೋರಿದೆ. ಶೇ 99.5 ನಷ್ಟು ಪ್ರಗತಿ ಸಾಧಿಸಿರುವ ಬೆಳಗಾವಿ ಮತ್ತು ಕೊಡಗು ಎರಡು ಜಿಲ್ಲೆಗಳು ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಣಿಯಲ್ಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.