ADVERTISEMENT

ಸಮುದಾಯ ಭವನಗಳಿಗೆ ಅಡಿಗಲ್ಲು

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 4:20 IST
Last Updated 1 ಜುಲೈ 2021, 4:20 IST
ಮನ್ನಾಎಖ್ಖೇಳಿಯ ಬಾಲಮ್ಮ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿದರು
ಮನ್ನಾಎಖ್ಖೇಳಿಯ ಬಾಲಮ್ಮ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿದರು   

ಚಿಟಗುಪ್ಪ: ‘ಪುಣ್ಯಸ್ಥಳಗಳ ಅಭಿವೃದ್ಧಿಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ನಾಗರಿಕರಲ್ಲಿ ಭಾವೈಕ್ಯತೆ ಬೆಳೆಯುತ್ತದೆ’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ ಹೇಳಿದರು.

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದಲ್ಲಿಯ ಬಾಲಮ್ಮ ದೇವಸ್ಥಾನ ಹಾಗೂ ಹುಸೇನಿ ಭಾಷಾ ದರ್ಗಾದಲ್ಲಿ ಬುಧವಾರ ಸಮುದಾಯ ಭವನಗಳ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು.

‘ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ಭವನಗಳ ನಿರ್ಮಾಣಕ್ಕೆ ಶುಭ ಗಳಿಗೆ ಕೂಡಿಬಂದಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು. ಹಲವು ವರ್ಷಗಳ ವರೆಗೂ ನಾಗರಿಕರಿಗೆ ಸದ್ಬಳಕೆ ಆಗುವಂತಾಗಬೇಕು’ ಎಂದರು.

ADVERTISEMENT

ಜೆಡಿಎಸ್‌ ಮುಖಂಡ ಸಂತೋಷ ರಾಸೂರ್‌, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ ಹಳ್ಳಿಖೇಡ, ಫಾರೂಕ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್‌ ಕನಕ್‌, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನರಾಜ್‌ ಹಾಗೂ ದೇಗುಲ, ದರ್ಗಾದ ಪದಾಧಿಕಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.